ಧಾರ್ಮಿಕ ಪ್ರವಾಸದಲ್ಲಿರುವ ಜೂನಿಯರ್ ಎನ್ಟಿಆರ್ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ರಿಷಬ್ ಶೆಟ್ಟಿ ಊರಾಗಿರುವ ಕೆರಾಡಿಗೆ ಜೂನಿಯರ್ ಎನ್ಟಿಆರ್ ಆಗಮಿಸಿದ್ದಾರೆ. ಈ ವೇಳೆ ಅಮ್ಮನ ಆಸೆ ತೀರಿಸಲು ನಂದಮೂರಿ ತಾರಕ್ ರಾಮ್ ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾಡು, ಬಂಡೆ ನಡುವೆ ಇರುವ ಪ್ರಾಕೃತಿಕ ರಮಣೀಯತೆಗೆ ತಾರಕ್ ಮಾರುಹೋಗಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಕೂಡಾ ಜೊತೆಗಿದ್ದರು.
ನಾಲ್ಕು ದಶಕದ ನಂತರ ಜೂ.ಎನ್ಟಿಆರ್ ತಾಯಿ ಶಾಲಿನಿ ನಂದಮೂರಿ ಕರಾವಳಿಗೆ ಬಂದಿದ್ದಾರೆ. ಪತ್ನಿ ಲಕ್ಷ್ಮಿ ಪ್ರಣತಿ, ಪ್ರಗತಿ ರಿಷಬ್, ಪ್ರಶಾಂತ್ ನೀಲ್, ಲಿಖಿತಾ ನೀಲ್ ಮೂಕಾಂಬಿಕೆಯ ದರ್ಶನ ಮಾಡಿ ಪ್ರಾಂಗಣದಲ್ಲಿರುವ ಗುಡಿಗಳಿಗೆ ಭೇಟಿ ಕೊಟ್ಟು ಪ್ರಸಾದ ಸ್ವೀಕರಿಸಿದ್ದರು.