- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮದುವೆ ಆಮಂತ್ರಣ ನೀಡಿದ ನಟಿ
- ಮೋದಿ ಅವರೊಂದಿಗೆ ಫೋಟೊಗೆ ಪೋಸ್ ಕೊಟ್ಟ ವರಲಕ್ಷ್ಮೀ ಶರತ್ಕುಮಾರ್
ತಮಿಳು – ತೆಲುಗು ನಟಿ ವರಲಕ್ಷ್ಮೀ ಶರತ್ಕುಮಾರ್ ಅವರು ತಮ್ಮ ಮದುವೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು. ಭಾವಿ ಪತಿ ನಿಕೋಲಾಯ್ ಜತೆ ವರಲಕ್ಷ್ಮೀ ಅವರು ಪ್ರಧಾನಿ ಮೋದಿ ಅವರೊಂದಿಗೆ ಫೋಟೊಗೆ ಪೋಸ್ ಕೊಟ್ಟಿದ್ದಾರೆ. ನಟಿ ವರಲಕ್ಷ್ಮೀ ಅವರು ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಫೋಟೋಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದೆವು. ಮೋದಿಯವರನ್ನು ಆಹ್ವಾನಿಸಿದ್ದು, ನಮ್ಮ ಭಾಗ್ಯ, ನಿಮ್ಮ ಬ್ಯುಸಿ ಶೆಡ್ಯೂಲ್ನ ಹೊರತಾಗಿಯೂ ನಮ್ಮೊಂದಿಗೆ ಸಮಯ ಕಳೆದಿದ್ದೀರಿ. ನಿಜವಾಗಿಯೂ ಗೌರವ ಇದು ಎಂದು ಬರೆದುಕೊಂಡಿದ್ದಾರೆ.