ಕಾಲಿವುಡ್ ಸ್ಟಾರ್ ವಿಜಯ್ ಸೇತುಪತಿ ಮತ್ತು ಕನ್ನಡತಿ ರುಕ್ಮಿಣಿ ವಸಂತ್ ಅಭಿನಯದ “ಏಸ್” ಸಿನಿಮಾ ಬಹುದಿನಗಳಿಂದ ಸುದ್ದಿ ಮಾಡ್ತಿದೆ. ಇದೀಗ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ.
ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಕುತೂಹಲ ಹೆಚ್ಚಿಸಿದ್ದು, ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ದೃಶ್ಯಗಳನ್ನು ಆನಿಮೇಟೆಡ್ ರೂಪದಲ್ಲಿ ಕಟ್ಟಿಕೊಡಲಾಗಿದೆ.
ವಿಜಯ್ ಸೇತುಪತಿ ಪಕ್ಕಾ ಮಾಸ್ ಲುಕ್ ನಲ್ಲಿ ಮಿಂಚಿದ್ದು , ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ. ಏಸ್ ಸಿನಿಮಾದಲ್ಲಿ ಯೋಗಿ ಬಾಬು ಲೀಡ್ ರೋಲ್ನಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ರಾಜಕುಮಾರ್ ಹೀಗೆ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
ಆರ್ಮುಗ ಕುಮಾರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಕರಣ್ ಬಹದ್ದೂರ್ ರಾವತ್ ಕ್ಯಾಮೆರಾ ವರ್ಕ್ ಮತ್ತು ಜಸ್ಟಿನ್ ಪ್ರಭಾಕರನ್ ಮ್ಯೂಸಿಕ್ ಚಿತ್ರಕ್ಕಿದೆ. ಕ್ರೈಮ್ ಥ್ರಿಲ್ಲರ್ ಕಾಮಿಡಿ ಜಾನರ್ ‘ಏಸ್ ‘ ಚಿತ್ರವನ್ನು 7Cs ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಸಾಕಷ್ಟು ಕುತೂಹಲ ಮೂಡಿಸಿರೋ ಈ ಚಿತ್ರ ಇದೇ ವರ್ಷ ತೆರೆಗೆ ಬರಲಿದೆ.