ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡು ತಿಂಗಳಾಗುತ್ತಾ ಬಂದಿದೆ. ದರ್ಶನ್ ನೋಡಲು ಪರಪ್ಪನ ಅಗ್ರಹಾರಕ್ಕೆ ಕುಟುಂಬಸ್ಥರು, ಸ್ನೇಹಿತರು ಬರ್ತಾನೆ ಇದ್ದಾರೆ. ಇನ್ನೂ ದರ್ಶನ್ ಅವರ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭಿಮಾನಿಗಳು ಡಿಬಾಸ್ ಆದಷ್ಟು ಆಚೆ ಬರಲಿ ಎಂದು ಸಿಕ್ಕ ಸಿಕ್ಕ ದೇವರಿಗೆ ಹರಕೆ ಹೊರುತ್ತಿದ್ದಾರೆ. ಇನ್ನೂ ಕೆಲ ಅಭಿಮಾನಿಗಳಂತೂ ದರ್ಶನ್ ಖೈದಿ ಸಂಖ್ಯೆಯನ್ನು ಕೈ, ಕುತ್ತಿಗೆ, ಎದೆ ಭಾಗದಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ದರ್ಶನ್ ಅಭಿಮಾನಿ ಡಿ ಬಾಸ್ ಹೆಸರನ್ನು ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಅಭಿಮಾನಿಗಳು ತಮ್ಮ ನೆಚ್ಚಿನ ಸಿನೆಮಾ ತಾರೆಯರ ಚಿತ್ರವನ್ನು, ಹೆಸರನ್ನು ಕೈ ಮೇಲೆ ಅಥವಾ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ದರ್ಶನ್ ಅಭಿಮಾನಿ ʼಡಿ ಬಾಸ್ʼ ಹೆಸರನ್ನು ತನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ಕುರಿತ ಪೋಸ್ಟ್ ಒಂದನ್ನು karunada_adhipati_official ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.