- ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ಡಿವೋರ್ಸ್ ಪ್ರಕರಣ
- ಶ್ರೀದೇವಿ ಭೈರಪ್ಪ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಸಪ್ತಮಿಗೌಡ
ಚಂದನ್ ಗೌಡ-ನಿವೇದಿತಾ ವಿಚ್ಛೇದನದ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೆ ನಟ ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಸುದ್ದಿ ರಾಜ್ಯದಲ್ಲಿ ಸುದ್ದಿಯಾಯ್ತು. ಇದೀಗ ನಟ ಯುವರಾಜ್ ಕುಮಾರ್ ಅವರ ಡಿವೋರ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟ ಯುವರಾಜ್ ಕುಮಾರ್, ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಯುವರಾಜ್ ಕುಮಾರ್ ಪರ ವಕೀಲ ಮಾತನಾಡಿ, ಶ್ರೀದೇವಿ ಅವರ ಚಾರಿತ್ಯ್ರದ ಬಗ್ಗೆ ಅನುಮಾನ ಬರುವಂಥಹ ಆರೋಪಗಳನ್ನು ಮಾಡಿದ್ದರು.
ಬಳಿಕ ಯುವರಾಜ್ಕುಮಾರ್ ಪತ್ನಿ ಶ್ರೀದೇವಿ ಹೇಳಿಕೆ ನೀಡಿದ್ದು, ಪತಿ ಯುವ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದರು. ಅಲ್ಲದೆ, ಸಪ್ತಮಿ ಗೌಡ ಹೆಸರನ್ನು ಸಹ ಪ್ರಕರಣದಲ್ಲಿ ಎಳೆದು ತಂದಿದ್ದರು. ಸಪ್ತಮಿ ಗೌಡ ಹಾಗೂ ಯುವರಾಜ್ ಪರಸ್ಪರ ಸಂಬಂಧದಲ್ಲಿದ್ದಾರೆ. ತಾವು ಅಮೆರಿಕಕ್ಕೆ ತೆರಳಿದಾಗ ಯುವ ಹಾಗೂ ಸಪ್ತಮಿ ಸಜೀವನ ನಡೆಸಿದ್ದಾರೆ ಎಂದು ಶ್ರೀದೇವಿ ಭೈರಪ್ಪ ಆರೋಪ ಮಾಡಿದ್ದರು.
ಇದೀಗ ನಟಿ ಸಪ್ತಮಿ ಗೌಡ, ಶ್ರೀದೇವಿ ಭೈರಪ್ಪ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು, ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿ ಸಪ್ತಮಿ ಗೌಡ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧ ಶ್ರೀದೇವಿ, ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಸಪ್ತಮಿ ಆರೋಪ ಮಾಡಿದ್ದು, ಶ್ರೀದೇವಿ ಭೈರಪ್ಪ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡುವಂತೆ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಸಲ್ಲಿಸಿದ್ದರು.
ಇನ್ನು ನಿರ್ಭಂದಕಾಜ್ಞೆ ಆದೇಶಿಸಿರುವ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ, ಶ್ರೀದೇವಿ ಭೈರಪ್ಪ ಅವರಿಗೆ ನೊಟೀಸ್ ಜಾರಿ ಮಾಡುವಂತೆ ಆದೇಶ ಮಾಡಿದೆ. ಆದರೆ ಶ್ರೀದೇವಿ ಭೈರಪ್ಪ ಪ್ರಸ್ತುತ ವಿದೇಶದಲ್ಲಿದ್ದಾರೆ. ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣದಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕಾದುನೋಡಬೇಕಿದೆ.