ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಸಾವನ್ನಪ್ಪಿದ್ದರು. ಇಂದು ನಟ ಶಿವರಾಜ್ಕುಮಾರ್ ಹಾಗೂ ಅವರ ಪತ್ನಿ ಗೀತಾ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬದವರಿಗೆ ಶಿವಣ್ಣ ಮತ್ತು ಗೀತಾ ದಂಪತಿ ಸಾಂತ್ವನ ಹೇಳಿ, 13 ಜನರ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ನೀಡುವ ಮೂಲಕ ಆರ್ಥಿಕ ಸಹಾಯ ಮಾಡಿದ್ದಾರೆ. ಬಳಿಕ ಗಾಯಾಳು ಅರ್ಪಿತಾ ಅವರ ಆರೋಗ್ಯವನ್ನು ಅವರು ವಿಚಾರಿಸಿದ್ದಾರೆ. ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್ ಜೊತೆ ಶಾಸಕ ಬಿ.ಕೆ. ಸಂಗಮೇಶ್ ಕೂಡ ಇದ್ದರು.