ಸಿಎಂ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ನಮ್ಮ ನಡುವೆ ಒಪ್ಪಂದವಾಗಿದೆ. ಅದನ್ನು ಈಗ ಬಹಿರಂಗಪಡಿಸಲಾಗದು ಎಂದು ಹೇಳುವ ಮೂಲಕ ಅಧಿಕಾರ ಹಸ್ತಾಂತರ ಕುರಿತ ವದಂತಿಗಳಿಗೆ ಡಿಸಿಎಂ ಡಿಕೆಶಿ ಮತ್ತೆ ಬೆಂಕಿ ಹಚ್ಚಿದ್ದಾರೆ. ಈ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.
ಅಧಿಕಾರದ ಒಪ್ಪಂದವಾಗಿದೆ ಎಂದ ಡಿಕೆಶಿಗೆ ಸಿಎಂ ಬಿಗ್ ಶಾಕ್ ನೀಡಿದ್ದಾರೆ. ಸಿಎಂ ಕುರ್ಚಿ ಬಗ್ಗೆ ಬಹಿರಂಗವಾಗಿ ಮಾತನಾಡಿದ ಡಿಕೆಶಿಗೆ ಸಿಎಂ ಡಿಚ್ಚಿ ಕೊಟ್ಟಿದ್ದಾರೆ. ನನ್ನ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ, ಸಿಎಂ ಸ್ಥಾನ ಹಂಚಿಕೆ ವಿಚಾರದಲ್ಲಿ ಯಾವುದೇ ಒಪ್ಪಂದ ನಡೆದಿಲ್ಲ, ಅಧಿಕಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನದ ವಿಚಾರದಲ್ಲಿ ಒಪ್ಪಂದ ಆಗಿರೋ ಬಗ್ಗೆ ಡಿಕೆಶಿ ಹೇಳಿಕೆ ನೀಡಿದ್ದರು. ನಮ್ಮ ಮಧ್ಯೆ ಯಾವ ಒಪ್ಪಂದವೂ ನಡೆದೇ ಇಲ್ಲ ಎಂದು ಹೇಳಿದ್ದಾರೆ ಸಿಎಂ ಸಿದ್ದರಾಮಯ್ಯ. ಹೈಕಮಾಂಡ್ ತೀರ್ಮಾನದಂತೆ ನಾನು ನಡೆದುಕೊಳ್ಳುತ್ತೇನೆ, ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಸೂಚನೆ ನೀಡಿಲ್ಲ ಎಂದು ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.