ಕೃಷ್ಣಾ ನದಿ ಉತ್ತರ ಕರ್ನಾಟಕದ ಜೀವನದಿಯಾಗಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ನಿರ್ಮಾಣ ಮಾಡಲಾಗಿದೆ. ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಡ್ಯಾಂ ಭರ್ತಿಯಾಗಿದೆ.
ಆಲಮಟ್ಟಿ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಅಲ್ಲದೆ ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಾಗಿನ ಅರ್ಪಿಸಲಿದ್ದಾರೆ.