ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನೆನ್ನೆ ರಾತ್ರಿ ಚಿರನಿದ್ರೆಗೆ ಜಾರಿದ್ದಾರೆ. ಅವರ ನಿಧನ ಇಡೀ ದೇಶದ ಜನತೆಗೆ ದುಃಖ ತಂದಿದೆ. ದೇಶದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ಅಪಾರವಾದ ಕೊಡುಗೆ ನೀಡಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ನ ಗೌವರ್ನರ್ ಆಗಿಯೋ ಸಹ ದೇಶದ ಆರ್ಥಿಕತೆಗೆ ತನ್ನದೇ ಆದ ಕೊಡುಗೆ ಕೊಟ್ಟವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು.
ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿ ರಾಜ್ಯಸಭೆಯ ವಿಪಕ್ಷನಾಯಕನಾಗಿ ಸೇವೆಸಲ್ಲಿಸಿದ್ದಾರೆ. ನಂತರ ಅವರು 2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಧಾನ ಮಂತ್ರಿಯಾಗಿ ನಾಮ ನಿರ್ದೇಶನಗೊಂಡು ದೇಶದ 13 ನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಂತಾಪ ಸೂಚಿಸಿದ್ದಾರೆ.