ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯರಿಗೆ ಹೂಗುಚ್ಛ ನೀಡಿ, ಹಸ್ತಲಾಘವ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.