ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಮೊದಲ ಹಾಗೂ ಎರಡನೇ ಪ್ರಕರಣದಲ್ಲಿಯೂ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು, ಇಂದು ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ: ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು!
ಶಾಸಕ ಸ್ಥಾನ ಅನರ್ಹ
ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್ಗೆ 7 ವರ್ಷದಷ್ಟು ಜೈಲು ಶಿಕ್ಷೆ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ.