- ಕೋವ್ಯಾಕ್ಸಿನ್ ನಲ್ಲಿ ಸಹ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿದೆ
- ಕೋವ್ಯಾಕ್ಸಿನ್ ಪಡೆದ ಶೇ.50 ರಷ್ಟು ಜನರಲ್ಲಿ ಸೋಂಕು ಪತ್ತೆ
ಇತ್ತೀಚೆಗೆ ಜಗತ್ತಿನಾದ್ಯಂತ ಅಸ್ಟ್ರಾಝೆನೆಕಾ ಕಂಪನಿ ಕೋವಿಶೀಲ್ಡ್ ಲಸಿಕೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ಲೆಟ್ ಕಡಿಮೆಯಾಗುವಂತಹ ಅಡ್ಡ ಪರಿಣಾಮ ಉಂಟು ಮಾಡುತ್ತದೆ. ಇದನ್ನು ಅಸ್ಟ್ರಾಝೆನೆಕಾ ಕಂಪನಿ ಲಂಡನ್ ಕೋರ್ಟ್ ಮುಂದೆ ಒಪ್ಪಿಕೊಂಡಿತ್ತು. ಇದೀಗ ನಮ್ಮ ಸ್ವದೇಶೀ ಲಸಿಕೆ ಕೋವ್ಯಾಕ್ಸಿನ್ ನಲ್ಲಿ ಸಹ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿದೆ.
ಕೋವ್ಯಾಕ್ಸಿನ್ ಲಸಿಕೆ ಪಡೆದ ಮೂರನೇ ಒಂದರಷ್ಟು ಜನರಲ್ಲಿ ಸೈಡ್ ಎಫೆಕ್ಟ್ ಇರುತ್ತದೆ ಎನ್ನುವ ಅಂಶ ಬಯಲಾಗಿದೆ. ಕೊರೊನಾ ಸಮಯದಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೋಟಿಕ್ (Bharat Biotech) ಕಂಪನಿ ಕೋವ್ಯಾಕ್ಸಿನ್ ಲಸಿಕೆ ಉತ್ಪಾದನೆ ಮಾಡಿತ್ತು. ಕೋವ್ಯಾಕ್ಸಿನ್ ನಲ್ಲಿ ಅಡ್ಡ ಪರಿಣಾಮಗಳು ಕಂಡುಬಂದಿದೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ(ಬಿಎಚ್ಯು) (Banaras Hindu University) ಸಂಶೋಧಕರು ನಡೆಸಿದ ಅಧ್ಯಯನದ ವರದಿಯಿಂದ ತಿಳಿದುಬಂದಿದೆ.
ಉಸಿರಾಟದಲ್ಲಿ ಸೋಂಕು, ಗಂಟಲು ಕೆರೆತ, ಮೂಗು ಸೋರುವಿಕೆ ಕೆಮ್ಮು ಲಕ್ಷಣ ಕಂಡು ಬಂದಿದೆ. ಇನ್ನೂ ಶೇ.1ರಷ್ಟು ಪ್ರಕರಣಗಳಲ್ಲಿ ಪಾಶ್ವವಾಯು, ನರ ಸಂಬಂಧಿತ ಆರೋಗ್ಯ ಸಮಸ್ಯೆ, ಕೋವ್ಯಾಕ್ಸಿನ್ ಪಡೆದ ಶೇ.50 ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಸ್ಟ್ರಿಂಜರ್ ನೇಚರ್ ಜರ್ನಲ್ ತನ್ನ ಅಧ್ಯಯನದ ವರದಿಯಲ್ಲಿ ತಿಳಿಸಿದೆ.