ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಇಂದು ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ 72 ವರ್ಷದ ಯೆಚೂರಿ ಅವರನ್ನು ದೆಹಲಿಯ ಏಮ್ಸ್ನಲ್ಲಿ ದಾಖಲಿಸಲಾಗಿತ್ತು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್ಗೆ ದಾಖಲಿಸಲಾಗಿತ್ತು.