ವೆಸ್ಟ್ ಇಂಡೀಸ್ನಲ್ಲಿ T20 ವರ್ಲ್ಡ್ಕಪ್ ಕಿರೀಟ ತೊಟ್ಟ ಕ್ಯಾಪ್ಟನ್ ರೋಹಿತ್ ಶರ್ಮಾ ರಿಟೈರ್ಮೆಂಟ್ ತೆಗೆದುಕೊಂಡು ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ.
ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಭಾರತದ ಟಿ20 ತಂಡಕ್ಕೆ ನಾಯಕ ಯಾರು ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ನಾಯಕತ್ವ ರೇಸ್ ನಲ್ಲಿ ವಿಶ್ವಕಪ್ನಲ್ಲಿ ಆಡಿರುವ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅವರ ಹೆಸರು ಚಾಲ್ತಿಯಲ್ಲಿದ್ದು ಬಿಸಿಸಿಐ ಯಾರಿಗೆ ಮಣೆ ಹಾಕುತ್ತದೆ ಎಂದು ಕಾದು ನೋಡಬೇಕಿದೆ.