- ಕೊಡಗಿನಲ್ಲಿ SSLC ವಿದ್ಯಾರ್ಥಿನಿಯ ಭೀಕರ ಹತ್ಯೆ
- ಪ್ರಕಾಶ್ ಎಂಬಾತ ಆಕೆಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ
- ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸ್ ಇಲಾಖೆಯ ಅಧಿಕಾರಿಗಳು
ಕೊಡಗು : ಕೊಡಗಿನಲ್ಲಿ SSLC ವಿದ್ಯಾರ್ಥಿನಿಯ ಭೀಕರ ಹತ್ಯೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಈ ಹೀನ ಕೃತ್ಯ ನಡೆದಿದೆ. ವಿದ್ಯಾರ್ಥಿನಿ ತಲೆ ಕತ್ತರಿಸಿ ಕೊಲೆಮಾಡಿದ್ದಾನೆ . 16 ವರ್ಷದ ಮೀನಾ ಕೊಲೆಯಾದ ವಿದ್ಯಾರ್ಥಿನಿ . 35 ವರ್ಷದ ಪ್ರಕಾಶ್ ಎಂಬಾತ ಕೊಲೆ ಮಾಡಿದ ರಾಕ್ಷಸ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸ್ ಆಗುವ ಮೂಲಕ ತನ್ನ ಶಾಲೆಗೆ 100% ಫಲಿತಾಂಶ ತಂದು ಕೊಟ್ಟಿದ್ದಳು. ಹೆತ್ತವರು, ಊರಿನ ಜನ ಮೀನಾ ಪಾಸ್ ಆದ ಸಂಭ್ರಮದಲ್ಲಿದ್ದರು. ಬೆಳಗ್ಗೆಯಿಂದಲೂ ತಾನು ಪಾಸಾದ ಖುಷಿಯಲ್ಲಿ ಇದ್ದ ಮೀನಾ, ಶಾಲೆಯತ್ತ ಬಂದು ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹಿಂತಿರುಗುತ್ತಿದ್ದಳು. ಇದೇ ಸಂದರ್ಭದಲ್ಲಿ ಪ್ರಕಾಶ್ ಆಕೆಯನ್ನು ಅಡ್ಡಗಟ್ಟಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಈ ಹೀನ ಕೃತ್ಯದ ಕುರಿತು ಇದೀಗ ಪೊಲೀಸ್ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ.