ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಇಂದು ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಸಿಟಿ ರವಿ ಅವರ ಈ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.
ಇದೀಗ ಪ್ರಕರಣದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ಅರ್ಜಿ ವಿಚಾರಣೆಯನ್ನು ನಾಳೆಗೆ (ಡಿಸೆಂಬರ್ 21) ಮುಂದೂಡಿದೆ.