ಬಂಗಾಳ ಕೊಲ್ಲಿಯಲ್ಲಿ ಅಕ್ಟೋಬರ್ 23ರಂದು ಚಂಡಮಾರುತ ಬೀಸುವ ಸಾಧ್ಯತೆ ಇದೆ. ಇದರಿಂದ ಪ.ಬಂಗಾಳ, ಒಡಿಶಾ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಎಚ್ಚರಿಸಿದೆ.
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ; ಜನಜೀವನ ಅಸ್ತವ್ಯಸ್ತ..!
ಅಂಡಮಾನ್ ಸಮುದ್ರದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆಯಿದೆ. ಒಂದು ವೇಳೆ ಚಂಡಮಾರುತ ಅಪ್ಪಳಿಸಿದರೆ ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ 20 ರಿಂದ 30 ಸೆ.ಮೀ ವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ. ಇದರ ಭಾಗವಾಗಿ ಈ ಪ್ರದೇಶಗಳ ಮೀನುಗಾರರನ್ನು ಮುಂದಿನ ಆದೇಶದ ವರೆಗೆ ಸಮುದ್ರಕ್ಕೆ ಇಳಿದಂತೆ ಮುನ್ನೆಚ್ಚರಿಸಿದೆ.