ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಗೆ ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನೂ ಸೇರಿದಂತೆ ಕೆಲ ಸಂಗಡಿಗರನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿತ್ತು. ದರ್ಶನ್ ಸಹಚರ ಮತ್ತು ಪ್ರಕರಣದಲ್ಲಿ ಅರೋಪಿ ನಂಬರ್ 14 ಆಗಿರುವ ಪ್ರದೋಶ್ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. 44 ದಿನಗಳ ಬಳಿಕ ಅವರನ್ನು ಪುನಃ ಬೆಂಗಳೂರಿನ ಕೇಂದ್ರೀಯ ಕಾರಾಗೃಹಕ್ಕೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಗಿದೆ.