ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ, ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ರು. ಮುಡಾ ವಿಚಾರವಾಗಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು ಬಿಜೆಪಿಯವರು ಹಗರಣಗಳ ಸರದಾರರು. ತಾವೇ ತೋಡಿಕೊಂಡಿರುವ ಬಾವಿಗೆ ಬೀಳಲು ಹೋಗುತ್ತಿದ್ದಾರೆ. ಇದು ಆತ್ಮಹತ್ಯೆ ಪ್ರಯತ್ನವಾಗಿದೆ. ದೇಶದಲ್ಲೇ ಕಾಂಗ್ರೆಸ್ ಆಡಳಿತದಲ್ಲಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ ಎಂದ್ರು.
ದೇಶದಲ್ಲಿ ಪಾದಯಾತ್ರೆ ಮಾಡುವುದನ್ನು ಆರಂಭಿಸಿದ್ದೇ ಕಾಂಗ್ರೆಸ್. ಮಹಾತ್ಮಾ ಗಾಂಧಿಜೀ ಅವರ ನಾಯಕತ್ವದಲ್ಲಿ ಪಾದಯಾತ್ರೆ ಆರಂಭವಾಗಿತ್ತು. ಸ್ವಾತಂತ್ರ್ಯ ಹೋರಾಟದಿಂದ ಭಾರತ ಜೋಡೋ, ಬಳ್ಳಾರಿ, ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. ಪಾದಯಾತ್ರೆ ನಮ್ಮ ಸ್ವತ್ತು. ಬಿಜೆಪಿ ಹಗರಣಗಳ ಸರದಾರರು. ಅವರ ಅಕ್ರಮಗಳನ್ನು ಬಿಚ್ಚಿಡುತ್ತೇವೆ. ಯಾರು ಎಷ್ಟು ನಿವೇಶನಕ್ಕೆ ಅರ್ಜಿ ಹಾಕಿದ್ದರು. ಎಷ್ಟು ನಿವೇಶನ ಪಡೆದಿದ್ದಾರೆ ಎಂಬುದನ್ನು ಬಹಿರಂಗ ಮಾಡುತ್ತೇವೆ” ಎಂದು ತಿಳಿಸಿದರು. ವಾಲ್ಮೀಕಿ ನಿಗಮದ ಹಗರಣದ ತನಿಖೆಯಲ್ಲಿ ಎಸ್ಐಟಿ ಮಧ್ಯಂತರ ವರದಿಯನ್ನು ನೀಡಲಿದೆಯೇ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು. ಬಿಜೆಪಿಯವರು ಸಂಸತ್ತಿನಲ್ಲೂ ಈ ವಿಚಾರವಾಗಿ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಬಗ್ಗೆ ಕೇಳಿದಾಗ, “ಅವರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗುತ್ತಿದೆ. ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ” ಎಂದು ಹೇಳಿದರು.