ವೃಷಭ ರಾಶಿ:ಮಾತಿಗೆ ಮಾತು ಬೆಳೆಯಬಹುದು. ಅದನ್ನು ನಿಭಾಯಿಸುವ ಕಲೆ ಗೊತ್ತಿರಲಿ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರೊಂದಿಗೆ ವಾದ ವಿವಾದಗಳು ಉಂಟಾಗುತ್ತವೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಬೇಕು.ಇಂದು ನಿಮಗೆ ಸಣ್ಣ ವಿಚಾರಗಳೂ ಬಹಳ ಮುಖ್ಯವಾಗುತ್ತವೆ. ಸಾಲವನ್ನು ಕೊಡುವ ಸಂದರ್ಭವು ಬರಬಹುದು. ಏನಾದರೂ ಹೇಳಿ ತಪ್ಪಿಸಿಕೊಳ್ಳುವುದು ಸೂಕ್ತ.
ಸಿಂಹ ರಾಶಿ:ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ಕೃಷಿಯಲ್ಲಿ ಲಾಭವನ್ನು ಪಡೆಯಲು ಹೆಚ್ಚಿನ ಓಡಾಟ ಮಾಡಬೇಕಾಗುವುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು. ಸಂಗಾತಿಯು ನಿಮ್ಮ ನಡೆಯನ್ನು ಅನುಮಾನಸಿಬಹುದು.ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಬಲರಾಗುತ್ತೀರಿ.ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು.
ವೃಶ್ಚಿಕ ರಾಶಿ: ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ನಿಗದಿತ ಸಮಯಕ್ಕೆ ಕೆಲಸವಾಗದೇ ಇರುವ ಕಾರಣ ಕೆಲಸವನ್ನು ಕೊಟ್ಟವರು ನಿಮ್ಮ ಮೇಲೆ ಮುನಿಸಿಕೊಂಡಾರು. ಪ್ರೇಮವನ್ನು ಒಪ್ಪಿಕೊಳ್ಳಲಾರರು. ಆದರೆ ಪೀಡಿಸುವುದು ಬೇಡ. ಅತಿಯಾದ ಕೆಲಸದಿಂದ ದೈಹಿಕ ಮತ್ತು ಮಾನಸಿಕ ಆಯಾಸ ಉಂಟಾಗಬಹುದು.ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನದನ್ನು ತೆಗೆದುಕೊಳ್ಳಲು ಪ್ರಯತ್ನಿಸಬೇಡಿ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ.