ಮೇಷ ರಾಶಿ: ನಿಮ್ಮ ಮನಸ್ಸು ಒಂದು ಕಡೆ ಸ್ಥಿರವಾಗಿ ನಿಲ್ಲುವುದಿಲ್ಲ. ನಿಮ್ಮ ಜೀವನದ ಅತ್ಯಂತ ಕಷ್ಟದ ದಿನಗಳನ್ನು ಎದುರಿಸಸುವಾಗ ಜೋಪಾನವಾಗಿರಿ. ಅಸ್ತವ್ಯಸ್ತವಾದ ವ್ಯವಹಾರವನ್ನು ಸುಸ್ಥಿತಿಗೆ ತರಲು ಪ್ರಯತ್ನಿಸುವಿರಿ. ಯಾರದರೂ ನಿಮಗೆ ಸವಾಲು ಹಾಕಬಹುದು. ದೇಹಕ್ಕೆ ಸಂಬಂಧಿಸಿದಂತೆ ಕೆಲವು ತೊಂದರೆಗಳು ಕಾಣಿಸಿಕೊಳ್ಳುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಯಾವದೇ ಅಪಶಬ್ದಗಳನ್ನು ಆಡಿ ವಾದವನ್ನು ದೊಡ್ಡ ಮಾಡಿಕೊಳ್ಳುವುದು ಬೇಡ. ಅಂದುಕೊಂಡಿದ್ದನ್ನು ಪಡೆಯುವ ತನಕ ತೃಪ್ತಿ ಕಾಣಿಸದು. ಮನೆಯ ಬಗ್ಗೆ ಚಿಂತಿಸಿ ನೀವು ಕಾಲಹರಣ ಮಾಡುವಿರಿ. ಮುಗಿದು ಹೋದ ಘಟನೆಗಳನ್ನು ನೆನಪಿಸಿಕೊಂಡು ಬೇಸರಪಡಬೇಡಿ. ಮನೆಯ ಜವಾಬ್ದಾರಿ ತೆಗದುಕೊಳ್ಳುವ ಸಂದರ್ಭ ಬರಬಹುದು.
ವೃಷಭ ರಾಶಿ: ನಿಮ್ಮ ವಿದ್ಯಾಭ್ಯಾಸ ಮುಂದುವರೆಸುವುದು ಕಠಿಣವಾಗಬಹುದು. ನಿಮ್ಮ ಸಣ್ಣ ವ್ಯಾಪಾರವನ್ನು ದೊಡ್ಡದು ಮಾಡಲಿದ್ದೀರಿ . ನಿಮ್ಮನ್ನು ಯಾರಾದರೂ ಅಪರಿಚಿತರು ಭೇಟಿ ಮಾಡಬಹುದು. ತೊಂದರೆಯನ್ನು ಎದುರಿಸಿ, ನಿಮ್ಮಷ್ಟಕ್ಕೆ ಸಮಾಧಾನ ತಂದುಕೊಳ್ಳುವಿರಿ. ಯಾರನ್ನಾದರೂ ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮಗೇ ನೆರವು ಬೇಕಾಗಿದ್ದರೂ ಇನ್ನೊಬ್ಬರ ಸಹಾಯಕ್ಕೆ ಹೋಗುವಿರಿ. ನಿಮ್ಮ ವಿರೋಧಿಗಳ ಸಂಖ್ಯೆ ಕಡಿಮೆಯಾಗುವುದು. ನಿಮ್ಮ ಇಂದಿನ ಕಾರ್ಯವು ಕ್ರಮಬದ್ಧವಾಗಿ ಇರಲಿ. ನಿದ್ದೆ ಹೆಚ್ಚು ಬರಲಿದೆ. ನಿಮ್ಮ ವಾಹನ ವಿಲ್ಲದೆ ಬೇಸರ ಪಡುವಿರಿ.
ಮಿಥುನ ರಾಶಿ: ಅವಕಾಶಗಳು ನಿಮ್ಮ ಪಾಲಿಗೆ ಮುಚ್ಚಿ ಹೋಗಲಿವೆ. ನಿಮ್ಮ ದುರಾಭ್ಯಾಸವು ಇಂದು ಭಹಿರಂಗವಾಗಲಿದೆ. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ. ನಿಮ್ಮ ವೃತ್ತಿಯ ಕುರಿತು ಯಾರಾದರೂ ಕೇಳಿಯಾರು. ಆದಾಯವನ್ನೂ ಕೇಳಬಹುದು. ಉನ್ನತ ವಿದ್ಯಾಭ್ಯಾಸವು ಯಶಸ್ವಿಯಾಗಿ ಪೂರೈಸುವಿರಿ. ವಿದೇಶದ ವ್ಯವಹಾರವು ನಿಮಗೆ ಸರಿಯಾಗಿ ಆಗಿಬರದು. ಹೊಸ ಉದ್ಯೋಗಕ್ಕೆ ಸೇರಿದ ನಿಮಗೆ ಸಂಕೋಚದಿಂದ ಇರುವಿರಿ. ನಿಮ್ಮ ಮಕ್ಕಳ ವರ್ತನೆಯಲ್ಲಿ ಬದಲಾವಣೆಯು ನಿಮಗೆ ಅಚ್ಚರಿಯನ್ನು ತಂದೀತು. ಆಗದಿರುವವರ ಬಗ್ಗೆ ಚಿಂತೆ ಪಡುವಿರಿ ಇದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.
ಕರ್ಕಾಟಕ ರಾಶಿ: ಕೆಲಸಗಳಲ್ಲಿ ತೊಡಕು ಉಂಟಾಗುವ ಸಾಧ್ಯತೆ ಇದೆ. ನಿಮ್ಮ ಸುತ್ತಲಿನ ಮಾತುಕತೆಗಳು ಬೇಸರ ತರಲಿವೆ. ಇಂದು ನಿಮ್ಮ ಮನಸ್ಸು ಅದರಲ್ಲಿಯೇ ಮುಳುಗಿ ಇರುವುದು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿವಸವೂ ಆಗಬಹುದು. ಸಾಹಿತ್ಯಾಸಕ್ತರು ತಮ್ಮ ಬಳಗದ ಜೊತೆ ಹೆಚ್ಚು ಸಮಯ ಇರುವರು. ಎಲ್ಲರೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡಲಿದ್ದು ನೀವು ಹತಾಶೆಯ ಭಾವ ಜಾಗೃತವಾಗಿ ಖಿನ್ನತೆಗೂ ಹೋಗಬಹುದು. ಜವಾಬ್ದಾರಿಯನ್ನು ನೀವು ನಿಭಾಯಿಸಲೂ ನಿಮಗೆ ಕಷ್ಟವಾದೀತು. ದೈವದ ಬಗ್ಗೆ ನಿಮಗೆ ಅಪನಂಬಿಕೆ ಬರುವುದು. ನಿಮ್ಮ ಶತ್ರುಗಳಿಗೆ ಮಾತಿನ ಪೆಟ್ಟು ಸರಿಹೋಗುವುದಿಲ್ಲ.
ಸಿಂಹ ರಾಶಿ: ನಿಮ್ಮ ನಿರ್ಧಾರ ಬದಯಾಸಿಕೊಳ್ಳುವು ಕಷ್ಟವಾಗಬಹುದು. ಉದ್ಯಮದ ವಿಸ್ತರಣೆ ಆಗಿ ಅದರಿಂದ ಸಂತಸ ತರಲಿದೆ . ಏಕಾಗ್ರ ಮನಸ್ಸಿನಿಂದ ನೀವು ಇಂದಿನ ಕೆಲಸದಲ್ಲಿ ತೊಡಗುವಿರಿ. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು. ಜಾಣ್ಮೆಯ ವ್ಯವಹಾರವನ್ನು ಇಂದು ಮಾಡಬೇಕಾದೀತು. ಒಂದೇ ಶ್ರಮಕ್ಕೆ ಎರಡು ಫಲವನ್ನು ನೀವು ಪಡೆಯುವಿರಿ. ಉದ್ಯೋಗದ ಸ್ಥಳದಲ್ಲಿ ಸಿಕ್ಕ ಪ್ರಶಂಸೆಯಿಂದ ಸಂತೋಷವು ಇಮ್ಮಡಿಯಾಗುವುದು. ಮಕ್ಕಳ ಪ್ರೀತಿಯನ್ನು ಪಡೆದುಕೊಳ್ಳುವಿರಿ. ಪ್ರೀತಿಪಾತ್ರರ ಜೊತೆ ಸಣ್ಣ ವೈಮನಸ್ಸು ಉಂಟಾಗಬಹುದು.
ಕನ್ಯಾ ರಾಶಿ: ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತೋಷ ಉಂಟಾಗಲಿದೆ. ನಿಮ್ಮ ಹಳೆಯ ಪ್ರತಿಜ್ಞೆಯನ್ನು ಇಂದು ಪೂರ್ಣ ಮಾಡಿದ ಸಂತೋಷವು ಇರುವುದು. ವಿವಾಹದ ಸುಖದಲ್ಲಿ ನೀವಿರುವಿರಿ. ಸಕಾರಾತ್ಮಕ ಆಲೋಚನೆಯನ್ನು ಪ್ರಯತ್ನಪೂರ್ವಕವಾಗಿ ಮಾಡುವಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ವಿದ್ಯುತ್ ಉಪಕರಣಗಳ ಖರೀದಿಯನ್ನು ಮಾಡುವಿರಿ. ವೃತ್ತಿಯಲ್ಲಿ ನಿಮ್ಮ ತಿಳಿವಳಿಕೆಯನ್ನು ಪ್ರದರ್ಶಿಸಿ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ. ಬಹಳ ಕಾಲದ ಹಿಂದೇ ಆಲೋಚಿಸಿದ್ದ ಕಾರ್ಯವು ಇಂದು ಆರಂಭಿಸಬೇಕು ಎಂದೆನಿಸುವುದು. ಯಾರ ಮೇಲೋ ಗೂಬೆ ಕೂರಿಸಿ ನೀವು ಸಂತೋಷಪಡುವುದು
ಅನಾವಶ್ಯಕವಾಗಬಹುದು.
ತುಲಾ ರಾಶಿ: ಇಂದಿನ ನಿಮ್ಮ ಕೆಲಸಗಳಿಗೆ ಜೊತೆಗಾರರು ಸಿಗುವ ಸಾಧ್ಯತೆ ಇದೆ. ಮನಃಸ್ಥಿತಿಯು ಸರಿ ಇಲ್ಲದ ಕಾರಣ ನೌಕರರ ಮೇಲೆ ಸಿಟ್ಟಾಗುವಿರಿ. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಪಿತ್ರಾರ್ಜಿತ ಆಸ್ತಿಗಾಗಿ ನೀವು ಆಸೆ ಪಡುವಿರಿ. ನಿಮ್ಮ ಚರಾಸ್ತಿಯು ನಷ್ಟವಾಗುವುದು. ಉದ್ಯೋಗದ ಸ್ಥಳದಲ್ಲಿ ನೀವು ಹೆಚ್ಚು ಓಡಾಟ ಮಾಡಬೇಕಾದೀತು. ಅಶಿಕ್ಷಿತರ ಜೊತೆ ಸುಮ್ಮನೇ ಕಲಹವಾಡುವಿರಿ. ಅಸಾಧ್ಯ ಎನಿಸಿದ್ದನ್ನು ಸುಮ್ಮನೇ ಮಾಡಲು ಹೋಗುವುದು ಬೇಡ. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರುವುದು ಒಳ್ಳೆಯದು.
ವೃಶ್ಚಿಕ ರಾಶಿ: ಯಶಸ್ಸಿಗಾಗಿಯೇ ಮಾಡುವ ಕೆಲಸದಿಂದ ಯಶಸ್ಸು ಸಿಗುವುದು ತೀರಾ ಕಷ್ಟವಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ಇನ್ನೊಂದಿಷ್ಟು ಜವಾಬ್ದಾರಿಯು ಬರಬಹುದು. ಉತ್ತಮ ಸ್ನೇಹಿತರನ್ನು ಸಂಪಾದಿಸಿಕೊಳ್ಳಿ. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ದರಿಯಾ ಗೊತ್ತಾಗಲಿದೆ. ಆಕಸ್ಮಿಕವಾಗಿ ಬರುವ ಹಣವನ್ನು ಭವಿಷ್ಯಕ್ಕಾಗಿ ಕೂಡಿ ಇಡುವಿರಿ. ಖಾಸಗಿ ಸಂಸ್ಥೆಯಲ್ಲಿ ನಿಮ್ಮ ಸ್ಥಾನವು ಏರಲಿದೆ. ಅಧಿಕಾರ ಇದೆ ಎಂದು ಏನನ್ನಾದರೂ ಹೇಳುವುದು ಬೇಡ. ಕೆಲಸದಲ್ಲಿ ಊಹಿಸಲಾಗದಷ್ಟು ಕಷ್ಟ ಕಾಣುವ ಸಾಧ್ಯತೆ ಇದೆ.
ಧನು ರಾಶಿ: ನಿಮ್ಮ ಪರವಾಗಿ ನಿಮ್ಮ ಆಪ್ತರು ನಿಲ್ಲದಿರುವುದು ನಿಮಗೆ ಬೇಸರ ತರಿಸಬಹುದು. ಇತರರ ಕೆಂಗಣ್ಣಿಗೆ ಬೀಳಬಹುದು. ನಿಮ್ಮ ಕಾರ್ಯವು ವಿಳಂಬವಾಗಲು ಕಾರ್ಮಿಕರು ಕಾರಣವಾಗುವರು. ಅವರ ಮೇಲೆ ಸಿಟ್ಟಗುವಿರಿ. ಮಾತಿನ ಮಿತಿಯನ್ನೂ ಮೀರಬಹುದು. ಹೂಡಿಕೆಯ ಚಿಂತನೆಯನ್ನು ಸಂಗಾತಿಯ ಜೊತೆ ಹಂಚಿಕೊಳ್ಳುವಿರಿ. ಪಕ್ಷಪಾತ ಮನಃಸ್ಥಿತಿಯು ನಿಮಗೆ ಶೋಭೆ ತರದು. ಈ ದಿನವನ್ನು ಕಳೆಯಲು ನೀವು ನಾನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ. ಒಂಟಿತನವು ನಿಮಗೆ ಇಷ್ಟವಾಗದು. ಇನ್ನೊಬ್ಬರ ನೋವು ಕಷ್ಟ ಕಂಡು ಸುಮ್ಮನಿರುವುದು ತಪ್ಪು.
ಮಕರ ರಾಶಿ: ನೀವು ಮಾಡದ ತಪ್ಪಿಗೆ ಹಿರಿಯರ ಮುಂದೆ ಕೈಕಟ್ಟಿ ನಿಲ್ಲುವ ಪರಿಸ್ಥತಿ ಬಬರಬಹುದು. ನಿಮಗೆ ಇಷ್ಟವಾಗದ ಕಾರ್ಯವನ್ನು ಎಷ್ಟೇ ಒತ್ತಾಯ ಮಾಡಿದರೂ ಮಾಡಲಾರಿರಿ. ನಿಮಗೆ ಇಂದು ದಣಿವಾಗುವ ಸಾಧ್ಯತೆ ಹೆಚ್ಚಿದೆ. ಕ್ರಿಯಾಶೀಲತೆಯನ್ನು ನೀವು ಬಿಟ್ಟಿರುವುದು ನಿಮ್ಮ ಮನಸ್ಸಿಗೆ ಬರಲಿದೆ. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ಸಾಲ ಕೊಟ್ಟವರು ಏನೂ ಹೇಳದೇ ಇರುವುದರಿಂದ ನಿಮಗೆ ಸ್ವಲ್ಪ ನೆಮ್ಮದಿ ಸಿಗಲಿದೆ. ನೀವು ಇಂದು ಪಕ್ಷಪಾತಕ್ಕೆ ಹೆಸರಾಗಬಹುದು. ದೂರ ಪ್ರಯಾಣವು ನಿಮಗೆ ನೋವನ್ನು ತರಬಹುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮಿಂದ ಆಗದೆ ಇರುವುದನ್ನು ಬೇರೆಯವರು ಮಾಡಬಹುದು.
ಕುಂಭ ರಾಶಿ: ಉದ್ಯೋಗವನ್ನು ಕೈ ಬಿಡುವ ಅವಕಾಶ ಇದೆ. ಇಂದು ನೀವು ಅತಿಯಾದ ಒತ್ತಡವನ್ನು ತಂದುಕೊಳ್ಳುವ ಅಗತ್ಯ ಇಲ್ಲ ನಿಶ್ಚಿಂತೆಯಿಂದ ಇರಿ. ನೀವು ನೆಪವೊಡ್ಡಿ ಯಾವುದೇ ಕಾರ್ಯದಲ್ಲಿ ತೊಡಗಲಾರಿರಿ. ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುವಿರಿ. ಮನೋವ್ಯಥೆಯಿಂದ ನಿಮಗೆ ಬಹಳಷ್ಟು ತೊಂದರೆಗಳು ಬರಬಹುದು. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು. ಮಕ್ಕಳ ವಿಚಾರದಲ್ಲಿ ನೀವು ತಿಳಿದುಕೊಳ್ಳಬೇಕಾದುದು ಬಹಳಷ್ಟು ಇವೆ. ಸಂಗಾತಿಯ ಮಾತಿನಲ್ಲಿ ನಿಮಗೆ ನಂಬಿಕೆ ಬರದು. ನಿಮ್ಮೊಳಗೇ ಇಟ್ಟುಕೊಂಡ ಅಸಮಾಧಾನವನ್ನು ಹೊರಹಾಕುವಿರಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ನಿಮ್ಮ ಹಠಮಾರಿ ಗುಣದಿಂದ ನಿಮಗೆ ನಷ್ಟವಾಗಬಹುದು.
ಮೀನ ರಾಶಿ; ನಿಮ್ಮ ಆರೋಗ್ಯದಲ್ಲಿ ಕೊಂಚ ಏರುಪೇರು ಕಾಣಬಹುದು. ನಿಮಗೆ ಇಂದು ವಿಶ್ರಾಂತಿಯನ್ನು ಪಡೆಯುವ ಕಾಲ. ಇಂದು ನೀವು ಅನಗತ್ಯ ಸನ್ನಿವೇಶಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ತಾರತಮ್ಯ ಭಾವವನ್ನು ತೋರಿಸಬೇಡಿ. ನಿಮ್ಮ ಕಾರ್ಯ ಕುಶಲತೆಗೆ ಮೆಚ್ಚುಗೆ ಪ್ರಾಪ್ತವಾಗುವುದು. ದಿನದ ಆರಂಭದಲ್ಲಿ ಆಲಸ್ಯ ತೋರಿದರೂ ಅನಂತರ ಉತ್ಸಾಹದಿಂದ ಇರುವಿರಿ. ಆಕಸ್ಮಿಕ ದ್ರವ್ಯ ಲಾಭದಿಂದ ಖುಷಿ ಪಡುವಿರಿ. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ದೂರವಾಣಿಯ ಬಳಕೆಯನ್ನು ಕಡಿಮೆ ಮಾಡಬೇಕು ಎಂದೆನಿಸುವುದು. ಸಂಗಾತಿಯ ಮಾನಸಿಕತೆಯು ನಿಮಗೆ ಗೊತ್ತಾಗದು. ಬಂಧುಗಳನ್ನು ಭೇಟಿಯಾಗಿ ನಿಮ್ಮ ಮನಸ್ಸು ಸ್ವಲ್ಪ ಹಗುರಾಗುವುದು. ಒಳ್ಳೆಯ ಸುದ್ದಿಯು ನಿಮ್ಮ ಖುಷಿಯನ್ನು ಹೆಚ್ಚಿಸುವುದು.