ತುಲಾ ರಾಶಿ: ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು. ತಾಳ್ಮೆ ಅಗತ್ಯ. ರಾಜಕೀಯ ಏರಿಳಿತ ಊಹಿಸುವುದು ಕಷ್ಟ. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯ. ಇಂದಿನ ನಿಮ್ಮ ತುರ್ತು ಕಾರ್ಯಗಳನ್ನು ನೀವು ಬಿಡಬೇಕಾದೀತು. ಯಾವ ಕಾರ್ಯಕ್ಕೂ ಉತ್ಸಾಹವೇ ಇಲ್ಲದಂತಾದೀತು. ಕೆಲಸಗಳೂ ಅಪೂರ್ಣವಾಗಿದ್ದು ಅಸಮಾಧನ. ನೂತನ ವಾಹನ ಖರೀದಿಯಿಂದ ಸಂತೋಷ. ಕಾರ್ಯದ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳಬೇಕಾಗುವುದು.
ವೃಶ್ಚಿಕ ರಾಶಿ: ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಸಂತಾನದ ವಿಚಾರದಲ್ಲಿ ಅಶಾಂತಿ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು. ಎಂದೋ ಕಾಣೆಯಾದ ವಸ್ತುವು ಅನಿರೀಕ್ಷಿತವಾಗಿ ಸಿಗುವುದು. ಮೇಲಧಿಕಾರಿಗಳು ಒತ್ತಡ ತಂದು ಕೆಲಸವನ್ನು ಮಾಡಿಸಿಕೊಳ್ಳುವರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಸಣ್ಣ ವಿಚಾರಕ್ಕೆ ಯಾರನ್ನೋ ದ್ವೇಷ ಮಾಡುವುದು ಸರಿಯಲ್ಲ.
ಧನು ರಾಶಿ: ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗುವುದು ಬೇಡ. ಜನಸಾಮಾನ್ಯರ ಜೊತೆ ಬೆರೆಯುವುದು ಇಷ್ಟವಾಗದು. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಸದಾ ಅನುಮಾನದಿಂದಲೇ ಇರುವಿರಿ. ಕುತೂಹಲದಲ್ಲಿ ಈ ದಿನವನ್ನು ಕಳೆಯುವಿರಿ. ಪತ್ರವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ.
ಮಕರ ರಾಶಿ: ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ನಿಮ್ಮ ವೃತ್ತಿಯಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸುವಿರಿ. ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು.
ಕುಂಭ ರಾಶಿ: ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು ಅದನ್ನು ಆ ಸಮಯದಲ್ಲಿ ನಿಭಾಯಿಸುವ ಜಾಣ್ಮೆ ಇರಲಿ. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಹೇಳಬೇಕಾದ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿಹಾಕಿಸುವುದು ಬೇಡ. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಹೆಚ್ಚಿನ ಆದಾಯಕ್ಕೆ ನೀವು ಚಿಂತನೆ ನಡೆಸುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ. ಮಕ್ಕಳ ಆರೋಗ್ಯವು ಕೆಡಬಹುದು. ಶತ್ರುಗಳ ಬಗ್ಗೆ ಯಾರಾದರೂ ಕಿವಿಚುಚ್ಚುವರು.
ಮೀನ ರಾಶಿ: ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ನೀರಿನ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ನಿಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾಸ ಇರಲಿದೆ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಆಮದು ವ್ಯವಹಾರವು ಸ್ವಲ್ಪ ಲಾಭವನ್ನು ಕೊಡುವುದು. ಅಧಿಕೃತ ಮೂಲದಿಂದ ಬಂದ ವಿಚಾರಗಳನ್ನು ಮಾತ್ರ ನಂಬಿ.