- ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ಸಾವು
- ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಘಟನೆ
ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ರಾತ್ರಿ ಇಡೀ ಭಾರೀ ಮಳೆ ಸುರಿದಿದ್ದು, ಇದರಿಂದ ಅನೂನಕ್ಕರ್ ಎಂಬವರ ಮನೆ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಹಾಗೂ ಮಕ್ಕಳಾದ ರಿಯಾನಾ ಮತ್ತು ರಿಫಾನ್ ಮೃತಪಟ್ಟಿದ್ದಾರೆ.
ಅಬೂಬಕ್ಕರ್ ಎಂಬುವವರ ಮನೆ ಗೋಡೆ ಬಿದ್ದು ಭಾರೀ ಅವಘಡ ಸಂಭವಿಸಿದೆ. ಮೂವರ ಮೃತದೇಹವನ್ನು ಹೊರತೆಗೆದಿದ್ದಾರೆ. ಆಗ್ನಿಶಾಮಕ ದಳದವರು ಸ್ಥಳೀಯರೊಂದಿಗೆ ಎರಡು ಗಂಟೆಗಳ ಕಾಲ ಶ್ರಮಿಸಿ ಬಾಲಕಿಯ ಮೃತದೇಹವನನು ಹೊರತೆಗಿದಿದ್ದಾರೆ.