ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಅಕ್ಟೋಬರ್ 22ರಂದು ಹೈಕೋರ್ಟ್ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದ ಮುಂದೆ ಹಾಜರಾದ ದರ್ಶನ್ ಪರ ವಕೀಲ ಎಸ್. ಸುನಿಲ್ ಕುಮಾರ್, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಕೋರಿ ಸಲ್ಲಿಸಿದ ಮೆಮೊ ಆಧರಿಸಿ ಅಕ್ಟೋಬರ್ 22 ಕ್ಕೆ ಅರ್ಜಿಯನ್ನು ಹೈಕೋರ್ಟ್ನಲ್ಲಿ ವಿಚಾರಣೆಗೆ ನಿಗದಿಪಡಿಸಲಾಗಿದೆ.