ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ ಹೈಕೋರ್ಟ್.
ಇದನ್ನೂ ಓದಿ: ಮತ್ತೆ ಒಂದಾಗ್ತಾರಾ ಐಕಾನಿಕ್ ಲವ್ ಜೋಡಿ!
ದರ್ಶನ್ ಪರ ವಕೀಲರಾದ ಸಿ ವಿ ನಾಗೇಶ್ ಮಧ್ಯಂತರ ಜಾಮೀನಿಗಾಗಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ದರ್ಶನ್ ಗೆ ತೀವ್ರ ಬೆನ್ನು ನೋವಿರುವ ಕಾರಣದಿಂದ ಅಪರೇಷನ್ ಅವಶ್ಯಕತೆ ಇದೆ ಎಂದು ಉಲ್ಲೇಖಿಸಿ, ವೈದ್ಯಕೀಯ ವಿಚಾರಗಳಿಗೆ ಮಧ್ಯಂತರ ಜಾಮೀನು ನೀಡಬೇಕು, ದರ್ಶನ್ ಗೆ ಸರ್ಜರಿ ಮಾಡಬೇಕು ಹಾಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಅಗತ್ಯ ಎಂದು ವೈದ್ಯರು ವರದಿಯಲ್ಲಿ ಕೂಡ ಹೇಳಿದ್ದಾರೆ ಎಂದು ವಾದ ಮಾಡಿದರು.
ದರ್ಶನ್ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್, ನಾಳೆ ಮಧ್ಯಾಹ್ನ 2.30ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.