ನಟ ದರ್ಶನ್ ಅವರಿಗೆ ಒಂದೇ ಕಡೆ ಕೂತು ಕಾಲು ನೋವು ಬಂದಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಹಾಗಾಗಿ ವಾಕಿಂಗ್ ಮಾಡಲು ಅನುಮತಿಸುವಂತೆ ಕಾರಗೃಹ ಇಲಾಖೆಯ ಉತ್ತರ ವಲಯ ಉಪಮಹಾನಿರೀಕ್ಷಕ ಟಿ.ಪಿ ಶೇಷ ಅವರಿಗೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಅವರು ಶೌಚಕ್ಕಾಗಿ ಸರ್ಜಿಕಲ್ ಚೇರ್ ಕೇಳಿರುವುದಾಗಿ ಟಿ.ಪಿ ಶೇಷ ತಿಳಿಸಿದ್ದಾರೆ. ಇಲಾಖೆ ಸೂಚನೆ ಮೇರೆಗೆ ಶನಿವಾರ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದ ಅವರು ಇಲ್ಲಿನ ವ್ಯವಸ್ಥೆ ಪರಿಶೀಲಿಸಿದರು.
ಜೈಲಿನಲ್ಲಿ ದರ್ಶನ್ ಅವರನ್ನು ಹೇಗೆ ನೋಡಿಕೊಳ್ಳ ಬೇಕು ಎಂದು ನಾನು ನಿರ್ದೇಶನ ನೀಡಿದ್ದೆ. ಅವುಗಳ ಪಾಲನೆ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿದ್ದೇನೆ. ಅಧಿಕಾರಿಗಳು ಸೂಚನೆಯನ್ನು ಸಮರ್ಪಕವಾಗಿ ಪಾಲಿಸುತ್ತಿದ್ದಾರೆ’ ಎಂದರು. ಆಹಾರ ತೆಗೆದುಕೊಳ್ಳದಿರುವ ಬಗ್ಗೆ ದರ್ಶನ್ ಅವರನ್ನು ವಿಚಾರಿಸಲಾಯಿತು ಎಂದು ಶೇಷ ರವರು ತಿಳಿಸಿದರು.
ಕುಟುಂಬಸ್ಥರು ಮತ್ತು ಅವರ ವಕೀಲರನ್ನು ಹೊರತುಪಡಿಸಿ ಬೇರೆಯಾರಿಗೂ ದರ್ಶನ್ ರನ್ನು ನೋಡಲು ಅವಕಾಶ ನೀಡುವುದಿಲ್ಲ. ರಾಜಕೀಯ ಒತ್ತಡಗಳಿಗೆ ಮಣಿಯುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. ಜೈಲಿನಲ್ಲಿ ಮೊಬೈಲ್ ಒಯ್ಯಲು ಸಿಬ್ಬಂದಿ ಸೇರಿದಂತೆ ಯಾರಿಗೂ ಅವಕಾಶ ನೀಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.