ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ಕೊನೆಗೂ ಸಿಕ್ಕೇ ಬಿಡ್ತು ಜಾಮೀನು, ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬೇಲ್ ಮಂಜೂರು ಮಾಡಿದೆ. 5 ತಿಂಗಳ ಬಳಿಕ ದರ್ಶನ್ ಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಕೊಲೆ ಆರೋಪಿ ದರ್ಶನ್ ಗೆ ದೀಪಾವಳಿ ಧಮಾಕ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಹೈಕೋರ್ಟ್. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ಅವಕಾಶ ಕಲ್ಪಿಸಿದೆ ನ್ಯಾಯಾಲಯ, ಹಾಗೂ ಪ್ರತಿ ವಾರ ಮೆಡಿಕಲ್ ರಿಪೋರ್ಟ್ ಸಲ್ಲಿಸಲು ದರ್ಶನ್ ಪರ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಹಾಗೂ ಪಾಸ್ ಪೋರ್ಟ್ ಸರೆಂಡರ್ ಮಾಡಲು ಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ: ದರ್ಶನ್ ಇಂದೇ ಬಳ್ಳಾರಿ ಜೈಲಿನಿಂದ ಬಿಡುಗಡೆ..!
ಇದರ ಜೊತೆ ಇಬ್ಬರ ಶ್ಯೂರಿಟಿ ಯನ್ನು ಸಹ ಹೈಕೋರ್ಟ್ ಕೇಳಿತ್ತು. ಇದಕ್ಕೆ ಪೂರಕವಾಗಿ ದರ್ಶನ್ಗೆ ಸಹೋದರ ದಿನಕರ್ ತೂಗುದೀಪ ಹಾಗೂ ನಟ ಧನ್ವೀರ್ ಗೌಡ ಶ್ಯೂರಿಟಿ ನೀಡಿದ್ದಾರೆ.