ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಅನ್ನೋದು ಬಹಿರಂಗವಾಗಿದೆ. ಜೈಲಿನ ಆವರಣದಲ್ಲಿ ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ಉಳಿದ ರೌಡಿ ಶೀಟರ್ಗಳ ಜೊತೆ ಕುಳಿತು ದರ್ಶನ್ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ವಿಡಿಯೋ ಕಾಲ್ನಲ್ಲಿಯೂ ಅವರು ಮಾತನಾಡಿದ್ದರು. ಈಗ ದರ್ಶನ್ ಅವರನ್ನು ನಿಯಂತ್ರಣಕ್ಕೆ ತರಲು ಜೈಲಧಿಕಾರಿಗಳು ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಚಿಂತನೆ ನಡೆದಿದೆ ಎನ್ನಲಾಗಿದೆ.
ರೌಡಿ ವಿಲ್ಸನ್ ಗಾರ್ಡನ್ ನಾಗನ ಜೊತೆ ದರ್ಶನ್ ಕುಳಿತಿದ್ದಾರೆ. ದರ್ಶನ್ಗೆ ಈ ಎಲ್ಲಾ ವ್ಯವಸ್ಥೆಯನ್ನು ನಾಗನೇ ಮಾಡುತ್ತಿದ್ದಾನೆ ಎನ್ನಲಾಗಿದೆ. ಆತನಿಗೆ ಸಾಕಷ್ಟು ಕಾಂಟ್ಯಾಕ್ಟ್ ಇರುವುದರಿಂದ ದರ್ಶನ್ಗೆ ಸಹಾಯ ಮಾಡುತ್ತಿದ್ದಾನೆ. ಈ ಕಾರಣಕ್ಕೆ ರೌಡಿ ನಾಗನ ಟೀಂ ಅಥವಾ ದರ್ಶನ್ ಟೀಂ ಬದಲಾವಣೆಗೆ ಚಿಂತನೆ ನಡೆಸಲಾಗಿದೆ. ಇಂದು ಸಂಜೆ ವೇಳೆಗೆ ಬೇರೆ ಜೈಲ್ಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ಚಿಂತಿಸಿದ್ದಾರಂತೆ.