ನಟ ದರ್ಶನ್ಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಈ ಮದ್ಯೆ ದರ್ಶನ್ ಅವರ ಅಧಿಕೃತ ಫ್ಯಾನ್ ಪೇಜ್ನಿಂದ ಇತರೆ ಅಭಿಮಾನಿಗಳಿಗೆ ಒಂದು ಸಂದೇಶ ರವಾನೆಯಾಗಿದೆ.
ದರ್ಶನ್ ಅವರ ಅಧಿಕೃತ ಫ್ಯಾನ್ಪೇಜ್ ಆದ ‘ಡಿ ಕಂಪನಿ’ ಈ ಬಗ್ಗೆ ಪೋಸ್ಟ್ ಮಾಡಿದೆ. ‘ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ, ನಮ್ಮ ಪ್ರೀತಿಯ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜಾಮೀನು ಸಿಕ್ಕಿದೆ. ಈ ಸಂತೋಷದ ಸಂಭ್ರಮದಲ್ಲಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ಮಾಧ್ಯಮದವರು, ರಾಜಕಾರಣಿಗಳು, ಬೇರೆ ನಟರು ಹಾಗೂ ಕಾನೂನಿನ ಬಗ್ಗೆ ನಿಂದನೆ ಬೇಡ’ ಎಂದು ಕೋರಲಾಗಿದೆ.