ನಟ ದರ್ಶನ್ ಕುಟುಂಬಕ್ಕೆ ಈಗ ಸಂಕಷ್ಟದ ಕಾಲ. ರೇಣುಕಾ ಸ್ವಾಮಿ ಮರ್ಡರ್ ಕೇಸ್ನಲ್ಲಿ ಎ2 ಆಗಿರುವ ದರ್ಶನ್ ಅವರು ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಅವರಿಗೆ ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದಾರೆ. ನೆನ್ನೆ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಬಂದು ವಿಜಯಲಕ್ಷ್ಮೀ ಅವರು ದರ್ಶನ ಪಡೆದಿದ್ದಾರೆ. ಇಂದು ಅವರು ನವ ಚಂಡಿಕಾ ಹೋಮ ಮಾಡಲಿದ್ದಾರೆ. ದರ್ಶನ್ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡಲಿದ್ದಾರೆ.