ಕನ್ನಡ ಚಿತ್ರರಂಗದ ಮುದ್ದಿನ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ರವರಿಗೆ ಇಂದು ಮಹತ್ವದ ದಿನವಾಗಿದೆ. ಕಾರಣ ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಈ ದಂಪತಿಗೆ ಫ್ಯಾನ್ಸ್ ಶುಭಾಶಯ ಕೋರುತ್ತಿದ್ದಾರೆ. ಮಿಲನಾ ನಾಗರಾಜ್ ಅವರಿಗೆ ಜನಿಸಿದ್ದು ಹೆಣ್ಣು ಮಗು. ಈ ವಿಚಾರವನ್ನು ದಂಪತಿ ರಿವೀಲ್ ಮಾಡಿದ್ದಾರೆ. ಮಗು ಹಾಗೂ ತಾಯಿಯ ಆರೋಗ್ಯ ಉತ್ತಮವಾಗಿದೆ ಎಂದು ಡಾರ್ಲಿಂಗ್ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ.