ದಾವಣಗೆರೆ: ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಪ್ರತಾಪ್ ಕುಮಾರ್ ಕೆ.ಜಿ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ.ಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾರಿನಲ್ಲಿ ವಿಷ ಸೇವಿಸಿದ್ದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.