ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್ ಹತ್ತಲಿದ್ದಾರೆ. ಬಳಿಕ ಡಿ.ಕೆ ಶಿವಕುಮಾರ್ ಫ್ಯಾಮಿಲಿ ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಭಾನುವಾರವಾದರೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ವಿಶೇಷ ಆಯುಕ್ತರುಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಕಾಮಾಗಾರಿಗಳ ಬಗ್ಗೆ ಮಲ್ಲೇಶ್ವರಂ ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಅಮೇರಿಕಾ ಪ್ರವಾಸದಿಂದ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್.