ಮೈಸೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ನ ʻಬೃಹತ್ ಜನಾಂದೋಲನ ಸಮಾವೇಶʼದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಮೈತ್ರಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜನತಾದಳ ಬಿಜೆಪಿ ಅವರು ಪಾಪ ವಿಮೋಚನೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ನಮ್ಮದು ಧರ್ಮಯುದ್ಧ, ಅನ್ಯಾಯದ ವಿರುದ್ಧ ಅದಕ್ಕೆ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಬಂದ ಸರ್ಕಾರವನ್ನು 10 ತಿಂಗಳಲ್ಲಿ ತೆಗೆಯಬೇಕು ಎಂದು ಹೊರಟಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ಗೆ 19 ಸೀಟ್ ಮಾತ್ರ ಬಂದಿವೆ. ನನ್ನ ನೇತೃತ್ವದಲ್ಲಿ ಕಾಂಗ್ರೆಸ್ಗೆ 136 ಸೀಟ್ ಬಂದಿದ್ದಾವೆ. ಬ್ರಿಟಿಷರ ಕೈಯಿಂದಲೇ ಕಾಂಗ್ರೆಸ್ ಪಕ್ಷವನ್ನು ತೆಗೆಯಲಾಗಿಲ್ಲ, ಇನ್ನೂ ಬಿಜೆಪಿ-ಜೆಡಿಎಸ್ ನಿಂದ ತೆಗೆಯಲು ಆಗುತ್ತಾ? ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ ನಿಮಗೆ, ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿದ್ದೇನೆ. ಈ ಬಂಡೆ ಜೊತೆ 136 ಜನ ಶಾಸಕರು ಇದ್ದಾರೆ ಎಂದು ಬಿಜೆಪಿಗೆ ಟಕ್ಕರ್ ಕೊಟ್ಟರು.