ದೆಹಲಿ : ಅನಾರೋಗ್ಯದ ರಜೆ ಹಾಕಿರುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆ ಹಲವು ಅಂತಾರಾಷ್ಟ್ರೀಯ ಮತ್ತು ವಿದೇಶಿಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆ ಕ್ರಮ ಗೊಂಡಿದ್ದು, ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಅವಧಿಯೊಳಗೆ ಆಗಮಿಸದಿದ್ದರೆ ಶಿಸ್ತು ಕ್ರಮ ನಡೆಸಲಾಗುವುದು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಏರ್ ಇಂಡಿಯಾದಲ್ಲಿ ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಬುಧವಾರ ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾದ ಅಂಗಸಂಸ್ಥೆಯಾದ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು.