- ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಜೂನ್ 1 ರವೆಗೆ ಮಧ್ಯಂತರ ಜಾಮೀನು ನೀಡಿದೆ.
- ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಶುಕ್ರವಾರ ಈ ತೀರ್ಪು ನೀಡಿದೆ.
- ಕೇಜ್ರಿವಾಲ್ಗೆ ಜಾಮೀನು ಸಿಕ್ಕಿರುವುದು ಆಮ್ ಆದ್ಮಿ ಪಕ್ಷಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.
ದೆಹಲಿ : ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದು, ಸುಪ್ರೀಂ ಕೋರ್ಟ್ ಜೂನ್ 1 ರವೆಗೆ ಮಧ್ಯಂತರ ಜಾಮೀನು ನೀಡಿದೆ. ಜೂನ್ 2ಕ್ಕೆ ಶರಣಾಗುವಂತೆ ತಿಳಿಸಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಶುಕ್ರವಾರ ಈ ತೀರ್ಪು ನೀಡಿದೆ. ದೆಹಲಿಯಲ್ಲಿ ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಕೇಜ್ರಿವಾಲ್ಗೆ ಜಾಮೀನು ಸಿಕ್ಕಿರುವುದು ಆಮ್ ಆದ್ಮಿ ಪಕ್ಷಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.
ಜಾಮೀನು ಸಿಕ್ಕ ನಂತರ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಹುದು ಮತ್ತು ಪತ್ರಿಕಾಗೋಷ್ಠಿ ನಡೆಸಬಹುದು. ಹಾಗೆಯೇ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು ಎಂದು ಹೇಳಲಾಗಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಏಪ್ರಿಲ್ 1 ರಿಂದ ಇಲ್ಲಿಯವರೆಗೆ ತಿಹಾರ್ ಜೈಲಿನಲ್ಲಿ ಅವರನ್ನು ಇರಿಸಲಾಗಿತ್ತು.
ಕೇಜ್ರಿವಾಲ್ ಅವರ ಬಿಡುಗಡೆಗಾಗಿ ಅನೇಕ ಕಾರ್ಯಕರ್ತರು ಸರ್ಕಾರ ಇಡಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇಂದು ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಸಂಸತ ವ್ಯಕ್ತಪಡಿಸಿದ್ದಾರೆ.