ದೆಹಲಿಯ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ. ಅಗ್ನಿಶಾಮಕ ಟೆಂಡರ್ಗಳೊಂದಿಗೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾರ್ತ್ ಬ್ಲಾಕ್ನಲ್ಲಿ ನಿಯೋಜಿಸಲಾದ ಅಧಿಕಾರಿಯೊಬ್ಬರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ಡಿಎಫ್ಎಸ್ ಗೆ ಕರೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಯಾವುದೇ ಅನುಮಾನಸ್ಪವಾದ ವಸ್ತುಗಳು ಏನು ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.