ದೆಹಲಿ : ದೆಹಲಿಯ ಶಾಲೆಗಳು ಹಾಗೂ ಪಶ್ಚಿಮ ಬಂಗಾಳ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿದ್ದು, ನಾವು ಭಯೋತ್ಪಾದಕರ ಗುಂಪಿಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ. ರಾಜಭವನ ಕಟ್ಟಡದ ಒಳಗೆ ಸ್ಫೋಟಕ ಸಾಮಾಗ್ರಿ ಇರಿಸಿದ್ದೇವೆ. ಅಲ್ಲಿರುವ ಅನೇಕರು ಸಾಯುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಪಶ್ಚಿಮ ಬಂಗಾಳ ಪೊಲೀಸರು ಇದೊಂದು ಹುಸಿ ಕರೆ ಎಂದಿದಾರೆ. ಕರೆ ಮಾಡಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.