ರಂಗೇರಿದ ಚನ್ನಪಟ್ಟಣ ಉಪಚುನಾವಣೆ ಕದನ, ಎಚ್ಡಿ ಕುಮಾರಸ್ವಾಮಿ ಅವರು ಲೋಕಸಭೆಗೆ ತೆರಳಿದ ಬಳಿಕ ತೆರವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಅಂತಿಮವಾಗಿದ್ದಾರೆ. ಸೈನಿಕ ಸಿ.ಪಿ ಯೋಗೇಶ್ವರ್ ಸ್ಪರ್ಧೆಗೆ ಗ್ರಿನ್ ಸಿಗ್ನಲ್ ಸಿಕ್ಕಂತಾಗಿದೆ. ಈ ಬಗ್ಗೆ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿದ್ದು, ನಾನೇ ಸ್ಪರ್ಧಿಸುವಂತೆ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ ಯೋಗೇಶ್ವರ್, ಕುಮಾರಸ್ವಾಮಿ ಅವರನ್ನು ಸಹ ಭೇಟಿ ಮಾಡಿ ಮಾತುಕತೆ ನಡೆಸಿದ್ದು ಸ್ಪರ್ಧೆ ಮಾಡಲು ಹೇಳಿದ್ದಾರೆ. ನೀವೇ ಅಧಿಕೃತವಾಗಿ ಘೋಷಣೆ ಮಾಡಿ ಎಂದು ಕೇಳಿಕೊಂಡಿದ್ದು, ಎರಡು ದಿನಗಳಲ್ಲಿ ಕುಮಾರಸ್ವಾಮಿ ಅವರೇ ಸ್ಪಷ್ಟಪಡಿಸಲಿದ್ದಾರೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.