- ದೆಹಲಿ ಮದ್ಯ ನೀತಿ ಪ್ರಕರಣ
- ಕೇಜ್ರಿವಾಲ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ತನಿಖೆ ನಡೆಸುತ್ತಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ತನಿಖೆ ಮತ್ತು ನ್ಯಾಯದ ಹಿತಾಸಕ್ತಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯ ಅಗತ್ಯವಿದೆ ಎಂದು ಸಿಬಿಐ ಹೇಳಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ತನಿಖೆ ನಡೆಸುತ್ತಿದ್ದು, ಕೇಜ್ರಿವಾಲ್ ಅವರು ಜೈಲು ಸೇರಿದ್ದರು. ತಿಹಾರ್ ಜೈಲಿನಿಂದಲೇ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದು ಕೋರ್ಟ್ ಮುಂದೆ ಹಾಜರುಪಡಿಸಿತ್ತು.
ಅರವಿಂದ್ ಕೇಜ್ರಿವಾಲ್ ಅವರ 3 ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ವಿಶೇಷ ನ್ಯಾಯಾಧೀಶರಾದ ಸುನೈನಾ ಶರ್ಮಾ ಅವರು 3 ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಆದೇಶವನ್ನು ಕಾಯ್ದಿರಿಸಿದ್ದರು. ಇದೀಗ ಇಂದು ತೀರ್ಪು ಹೊರಹಾಕಿದ್ದು, ಇನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.