ನವದೆಹಲಿ: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಜನರು ಲಕ್ಷ್ಮೀ ದೇವಿಯನ್ನು ಪೂಜಿಸಿ ತಮ್ಮ ಭಕ್ತಿಯನ್ನು ತೋರ್ಪಡಿಸಿದ್ದಾರೆ. ದೀಪಾವಳಿ ಸಮಯದಲ್ಲಿ ನಾವು ಸಾಮಾನ್ಯವಾಗಿ ಪಟಾಕಿ ಹೊಡೆಯುತ್ತೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ದೀಪಾವಳಿಯ ಹಬ್ಬದಂದು ಪಟಾಕಿಗಳ ಬದಲು ಹಣವನ್ನು ಸುಟ್ಟು ಹಾಕಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
kumardineshbhai049 ಎಂಬ ಇನ್ಸಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಘದೆ. ಏಳು ದಿನಗಳ ಹಿಂದೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ಈವರೆಗೂ 2.9 ಮಿಲಿಯನ್ ಜನ ಅದನ್ನು ವೀಕ್ಷಿಸಿದ್ದಾರೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಕಮೆಂಟ್ ಮಾಡಿದ್ದು, ಇದು ಪಬ್ಲಿಸಿಟಿ ಗಿಮಿಕ್ ಎಂದು ಕಿಡಿಕಾರಿದ್ದಾರೆ. ಕೆಲವರು ಈ ರೀತಿ ಹಣ ಸುಡುವ ಬದಲು ಬಡವರಿಗಾದರೂ ದಾನ ಮಾಡಿ ಎಂದು ಸಲಹೆ ನೀಡಿದ್ದಾರೆ. ಇನ್ನೂ ಕೆಲವರು ಪೊಲೀಸ್ ಕ್ರಮಕ್ಕೆ ಆಗ್ರಹಿಸಿದ್ದು, ದುಡ್ಡನ್ನು ಸುಡುತ್ತಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆಯ ಪ್ರಕಾರ ಯಾವುದೇ ನೋಟನ್ನು ನಾಶಪಡಿಸುವುದು ಅಥವಾ ಸುಡುವುದು ಶಿಕ್ಷಾರ್ಹ ಅಪರಾಧವಾಗಿದುದ, ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುತ್ತದೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಿಡಿಕಾರಿದ್ದು, ಆರ್ಬಿಐ ಕ್ರಮ ಜರುಗಿಸುತ್ತಾ ಇಲ್ಲವಾ ಎಂದು ಕಾದು ನೋಡಬೇಕಿದೆ.