ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹೆಚ್ಚುತ್ತಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿಯನ್ನು ಪ್ರಕಟಣೆ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಇದೀಗ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಕೇಂದ್ರದ ಅಧೀನದಲ್ಲಿರುವ ಸಂಸ್ಥೆಗಳಿಗೆ ಈ ಮಾರ್ಗಸೂಚಿ ಅನ್ವಯಿಸುತ್ತದೆ.
ಮಾರ್ಗಸೂಚಿ
- ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತೆಗೆದುಕೊಳ್ಳಬಹುದಾದ ಕ್ರಮಗಳ ಫಲಕ ಅಳವಡಿಸಬೇಕು.
- ಆಸ್ಪತ್ರೆಯ ಪ್ರಮುಖ ಪ್ರದೇಶಗಳಲ್ಲಿ ಗುಣಮಟ್ಟದ ಸಿಸಿಟಿವಿ ಕ್ಯಾಮರ ಅಳವಡಿಸಬೇಕು.
- ಆಸ್ಪತ್ರೆಗಳಲ್ಲಿ ಕಾನೂನು ಕ್ರಮಗಳ ಕುರಿತು ಫಲಕ ಹಾಕಬೇಕು.
- ಸಿಸಿಟಿವಿ ಕಂಟ್ರೋಲ್ ರೂಂ ಸ್ಥಾಪಿಸಬೇಕು.
- ದಿನದ 24 ಗಂಟೆಗಳು ಮಾನಿಟರ್ ಮಾಡಬೇಕು.
- ಸೂಕ್ತ ತರಬೇತಿ ಹೊಂದಿದ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು.
- ಆಸ್ಪತ್ರೆಯ ಪ್ರಮುಖ ಪ್ರದೇಶಗಳಲ್ಲಿ ಐಡಿಕಾರ್ಡ್ ತಪಾಸಣೆ ಮಾಡಬೇಕು.
- ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು.
- ರೋಗಿಯ ಜೊತೆ ಒಬ್ಬರು ಅಥವಾ ಇಬ್ಬರಿಗೆ ಇರಲು ಅವಕಾಶ ಇರಬೇಕು.
- ಅಣಕು ಪ್ರದರ್ಶನದ ಮೂಲಕ ಆಗಾಗ ಸಿಬ್ಬಂದಿಗಳಲ್ಲಿ ಜಾಗೃತಿ ಮೂಡಿಸಬೇಕು.
- ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು.
ರಾತ್ರಿ ಪಾಳಿಯಲ್ಲಿ ಮಹಿಳಾ ಸಿಬ್ಬಂದಿಗೆ ಅಗತ್ಯ ರಕ್ಷಣೆ ನೀಡಬೇಕು ಎಂಬ ಅಂಶಗಳನ್ನು ಒಳಗೊಂಡು ಪ್ರಕಟಣೆಯಲ್ಲಿದೆ.