- ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ
- ಚಂಡಿಗಢ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ
ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ್ದಾರೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ.
ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್ಪೋರ್ಟ್ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.