- ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್ಡಿಕೆ
- ಉಕ್ಕು ಖಾತೆಗೆ ಸಂಬಂಧಿಸಿದ ಕಡತಕ್ಕೆ ಹೆಚ್ಡಿಕೆಯಿಂದ ಮೊದಲ ಸಹಿ
ಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗೆ ಸಂಬಂಧಿಸಿದ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ ಕಡತಕ್ಕೆ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಬುಧವಾರ ಸಹಿ ಹಾಕಿದರು.
ಉಭಯ ಇಲಾಖೆಗಳ ಉನ್ನತ ಅಧಿಕಾರಿಗಳ ಜತೆಗೆ ಸಚಿವರು ಸಭೆ ನಡೆಸಿ ಇಲಾಖೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ದೇವದಾರಿ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ. ಈ ಯೋಜನೆಗೆ ಕರ್ನಾಟಕ ಸರ್ಕಾರ ಸಹ ಒಪ್ಪಿಗೆ ನೀಡಬೇಕಿದೆ. ಕುಮಾರಸ್ವಾಮಿ ಅವರು ಸಚಿವರಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.