ಸಂಸತ್ ಭವನದಲ್ಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕಚೇರಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿ ಪಾದಯಾತ್ರೆ ಬಗ್ಗೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಅಗರವಾಲ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ್, ಸಂಸದ ಮಲ್ಲೇಶ್ ಬಾಬು ಭಾಗಿಯಾಗಿದ್ದರು.
ಪಾದಯಾತ್ರೆ ಮುಂದೂಡುವಂತೆ ಈ ಹಿಂದೆ ಜೆಡಿಎಸ್ ನಾಯಕರು ಮನವಿ ಮಾಡಿದ್ದರು. ಈ ಕುರಿತಂತೆ ಬಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ , ಅಮಿತ್ ಶಾ ಅವರನ್ನು ನಿನ್ನೆ ಭೇಟಿ ಮಾಡಿ ಚರ್ಚೆ ನಡೆಸಿದ್ದರು.