- ಎರಡನೇ ಬಾರಿಯೂ ಸ್ಪೀಕರ್ ಆದ ಓಂ ನಿರ್ಲಾ
- ಓಂ ಬಿರ್ಲಾ ಅವರನ್ನು ಅಭಿನಂದಿಸಿದ ಮೋದಿ, ರಾಹುಲ್ ಗಾಂಧಿ
18 ನೇ ಲೋಕಸಭೆಯ ಸ್ಪೀಕರ್ ಆಗಿ ಭಾರತೀಯ ಜನತಾ ಪಕ್ಷದ ನಾಯಕ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ.
ಪ್ರತಿಪಕ್ಷಗಳು ಕಾಂಗ್ರೆಸ್ ನಾಯಕ ಕೆ ಸುರೇಶ್ ಅವರನನು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲು ಪ್ರಸ್ತಾವನೆಯನ್ನು ಮಂಡಿಸಿದ್ದವು. ಆದರೆ ಧ್ವನಿ ಮತದ ನಂತರ ಸದನವು ಪ್ರಧಾನಿ ಮೋದಿ ಅವರ ಪ್ರಸ್ತಾಪವನನು ಅಂಗೀಕರಿಸಿದ ನಂತರ ಅವರನ್ನು ತಿರಸ್ಕರಿಸಲಾಯಿತು.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಭ್ಯರ್ಥಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಕಾರಣ ದಶಕಗಳಲ್ಲಿ ಮೊದಲ ಬಾರಿಗೆ ಲೋಕಸಭೆ ಸ್ಪೀಕರ್ ಚುನಾವಣೆ ನಡೆದಿದೆ.