ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮನು ಭಾಕರ್ ನೀಡಿದ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದು, ಇತಿಹಾಸ ನಿರ್ಮಿಸಿದ ಮನು ಭಾಕರ್ ಅವರ ಮುಂದಿನ ವೃತ್ತಿಜೀವನವು ಶುಭಕರವಾಗಿರಲಿ, ಆಕೆಯ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆಯಾಗಿದೆ ಎಂದು ತಿಳಿಸಿದ್ದಾರೆ.
ಮನು ಭಾಕರ್ ಸಹ ರಕ್ಷಣಾ ಸಚಿವರನ್ನು ಭೇಟಿಯಾದ ಫೋಟೊಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ಬಿಡುವಿಲ್ಲದ ಸಮಯದ ನಡುವೆಯೂ ನಮ್ಮನ್ನು ಭೇಟಿ ಮಾಡಿ ಸ್ಫೂರ್ತಿದಾಯಕ ಮಾತುಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.