- 18 ನೇ ಲೋಕಸಭೆಯ ನೂತನ ಸಭಾಧ್ಯಕ್ಷರಾಗಿ ಓಂ ಬಿರ್ಲಾ ಆಯ್ಕೆ
- ಅಭಿನಂದನೆ ತಿಳಿಸಿದ ಸಂಸದ ಬಸವರಾಜ ಬೊಮ್ಮಾಯಿ
ನವದೆಹಲಿ: 18 ನೇ ಲೋಕಸಭೆಯ ನೂತನ ಸಭಾಧ್ಯಕ್ಷರಾಗಿ ಓಂ ಬಿರ್ಲಾ ಅವರು ಪುನರಾಯ್ಕೆ ಆಗಿದ್ದು, ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಮುಂದಿನ ಐದು ವರ್ಷದಲ್ಲಿ ಓಂ ಬಿರ್ಲಾ ಅವರ ನೇತೃತ್ವದಲ್ಲಿ ಸಂಸತ್ ಕಲಾಪಗಳು ಸುಗಮವಾಗಿ ನಡೆದು, ಅವರು ದೇಶದ ಸಮಗ್ರತೆ ಮತ್ತು ಅಖಂಡತೆ ಕಾಪಾಡಿಕೊಂಡು ಸರ್ವತೋಮುಖ ಅಭಿವೃದ್ಧಿಯ ಕುರಿತು ಚರ್ಚೆಗಳು ನಡೆಯುವಂತೆ ನೋಡಿಕೊಂಡು ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಾರೆ ಎನ್ನುವ ವಿಶ್ವಾಸ ನನಗಿದೆ.
ಓಂ ಬಿರ್ಲಾ ಅವರನ್ನು ಸಭಾಧ್ಹಕ್ಷರನ್ನಾಗಿ ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಎನ್ ಡಿಎ ನಾಯಕರಿಗೆ ಧನ್ಯವಾದಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.