- 18 ನೇ ಲೋಕಸಭೆಯ ಮೊದಲ ಅಧಿವೇಶನ
- ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಹೆಚ್ಡಿ ಕುಮಾರಸ್ವಾಮಿ
18 ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಹೆಚ್ಡಿ ಕುಮಾರಸ್ವಾಮಿ ಅವರು ಲೋಕಸಭೆಯ ಸದಸ್ಯರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿರುವ ಅವರು, 18 ನೇ ಲೋಕಸಭೆಯ ಸದಸ್ಯನಾಗಿ ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾದ್ಯಕ್ಷರಾದ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ಭಾರತದ ಪ್ರಜಾಪ್ರಭುತ್ವದ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತೃಾದ ಮಂಡ್ಯ ಲೋಕಸಭೆಯ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು ಅಣ್ಣ ತಮ್ಮಂದಿರು, ಅಕ್ಕ ತಮ್ಮಂದಿರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.