- 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭ
- ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ 9 ರಂದು ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದು ಲೋಕಸಭೆಯ ಸದಸ್ಯರಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.